Latest

ಅತ್ಯಾಚಾರ ಆರೋಪ: ಬೆಂಗಳೂರಲ್ಲಿ ಮಾಜಿ ಸಚಿವ ಆರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಎಐಎಡಿಎಂಕೆ ನಾಯಕ ಮಣಿಕಂಠನ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಮಲೇಷ್ಯಾ ಮೂಲದ ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಬಳಸಿಕೊಂಡು ಗರ್ಭಪಾತಕ್ಕೂ ಕಾರಣರಾಗಿದ್ದರಲ್ಲದೇ, ಖಾಸಗಿ ಫೋಟೋಗಳನ್ನು ತೋರಿಸಿ ಬೆದರಿಕೆಯೊಡ್ದುತ್ತಿರುವುದಾಗಿ ಸ್ವತ: ನಟಿ ಮಾಜಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಂಧನ ಭೀತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಣಿಕಂಠನ್ ನಿರೀಕ್ಷಣಾ ಜಾಮೀನಿಗಾಗಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Home add -Advt

ಆದರೆ ಮದ್ರಾಸ್ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೇ ಮಣಿಕಂಠನ್ ತಲೆಮರೆಸಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು, ಪೊಲೀಸರು ಮಣಿಕಂಠನ್ ಅವರನ್ನು ಬಂಧಿಸಿದ್ದಾರೆ.

ಬೆಳಗಾವಿ ಸೇರಿದಂತೆ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಅನ್ ಲಾಕ್

Related Articles

Back to top button