ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಎಐಎಡಿಎಂಕೆ ಕಾರ್ಯಕರ್ತರ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡು ಬಣಗಳ ಕಾರ್ಯಕರ್ತರು ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
ಎಐಎಡಿಎಂಕೆಯ ಇಪಿಎಸ್ ಹಾಗೂ ಒಪಿಎಸ್ ಬಣಗಳ ನಡುವೆ ಮಾರಾಮಾರಿ ನಡೆದಿದೆ. ಎಐಎಡಿಎಂಕೆ ಕಚೇರಿ ಎದುರು ಎರಡೂ ಬಣಗಳ ಕಾರ್ಯಕರ್ತರು ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಪರಸ್ಪರ ಕಲ್ಲುತೂರಾಟ ನಡೆಸಿ ದೊಣ್ಣೆಗಳಿಂದ ಹೊಡೆದಾಡಿದ್ದಾರೆ. ಬಳಿಕ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಈ ಗಲಾಟೆ ನಡೆದಿದೆ. ಇ.ಪಳನಿಸ್ವಾಮಿ ನೇತೃತ್ವದಲ್ಲಿ ಇಂದು ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಯಲಿದೆ. ಆದರೆ ಓ ಪನ್ನೀರ್ ಸೆಲ್ವಂ ಬೆಂಬಲಿಗರು ಎಐಎಡಿಎಂಕೆ ಕಚೇರಿ ಬಾಗಿಲು ಒಡೆದು ದಾಂಧಲೆ ನಡೆಸಿದ್ದಾರೆ. ಸಭೆಗೂ ಮುನ್ನವೇ ಉಭಯ ನಾಯಕರ ಬೆಂಬಲಿಗರ ನಡುವೆ ಸಂಘರ್ಷ ನಡೆದಿದೆ ಎಂದು ತಿಳಿದುಬಂದಿದೆ.
#WATCH Chennai, TN: O Paneerselvam supporters break open the door of AIADMK office, ahead of party's general council meeting being led by E Palaniswami pic.twitter.com/A5wNwpHPgk
— ANI (@ANI) July 11, 2022
ಜುಲೈ 14ರವರೆಗೂ ಭಾರಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ