Latest

ಯಾರಾಗಲಿದ್ದಾರೆ ಎಐಸಿಸಿ ಅಧ್ಯಕ್ಷರು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ.

ಬೆಳಿಗ್ಗೆ 10 ಗಂಟೆಯಿಂದ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡಿವೆ ಭಾರಿ ಪೈಪೋಟಿ ಇದ್ದು, ಕಾಂಗ್ರೆಸ್ ಅಧ್ಯಕ್ಷೀಯ ಪಟ್ಟ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

Home add -Advt

24 ವರ್ಷಗಳ ಬಳಿಕ ಎಐಸಿಸಿ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಗಾಂಧಿ ಕುಟುಂಬದ ಹೊರತಾದವರು ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ ಎಂಬ ಮಾತು ಕೇಳಿಬರುತ್ತಿದೆ.

ಐವರು ಏಜೆಂಟರ ಸಮ್ಮುಖದಲ್ಲಿ ಮತ ಎಣಿಕೆ ನಡೆದಿದ್ದು, ಮಧ್ಯಾಹ್ನ 3-4 ಗಂಟೆ ವೇಳೆಗೆ ಫಲಿತಾಂಶ ಹೊರಬೀಳಲಿದೆ.

ಮತ್ತೆ ಭಾರಿ ಮಳೆ ಎಚ್ಚರಿಕೆ; 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

https://pragati.taskdun.com/latest/karnatakaheavy-rainyellow-alert-2/

Related Articles

Back to top button