Latest

AICC ಅಧ್ಯಕ್ಷ ಸ್ಥಾನದ ಚುನಾವಣೆ: ಸರತಿ ಸಾಲಿನಲ್ಲಿ ನಿಂತು ರಾಹುಲ್ ಗಾಂಧಿ ಮತದಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಆರಂಭವಾಗಿದ್ದು, ಕಾಂಗ್ರೆಸ್ ನಾಯಕರು ಮತ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವ ಸಂಸದ ರಾಹುಲ್ ಗಾಂಧಿ, ಬಳ್ಳಾರಿಯ ಸಂಗನಲ್ಲು ಕ್ಯಾಂಪ್ ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ಮತದಾನ ಮಾಡಿದರು.

Home add -Advt

ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರಿಗಳು ಉಳಿದುಕೊಂಡಿರುವ ಕ್ಯಾಂಪ್ ನಲ್ಲಿಯೇ ಮಾ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಮತದಾನ ಮಾಡಿದ್ದಾರೆ.

ಇನ್ನು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಆಗಮಿಸಿ ಮತದಾನ ಮಾಡಿದರು. ಮತದಾನಕ್ಕೆ ಆಗಮಿಸಿದ ಖರ್ಗೆ ಅವರನ್ನು ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.

ಇದೇ ವೇಳೆ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಉಪನಾಯಕ ಯುಟಿ.ಖಾದರ್ ಮೊದಲಾದವರು ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಮತ ಚಲಾಯಿಸಲು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಸೋಮವಾರ ಬಂದಾಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹಸ್ತಲಾಘವ ಮಾಡಿ ಶುಭ ಹಾರೈಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಜತೆಗಿದ್ದರು.

ಕಾನೂನು ಕೈಗೆತ್ತಿಕೊಂಡರೆ ಪರಿಣಾಮಕ್ಕೆ ನೀವೇ ಹೊಣೆ; ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ

https://pragati.taskdun.com/latest/suratkal-toll-gateremovalprotestnalin-kumar-kateel/

Related Articles

Back to top button