ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಭಾರತದ ದ್ರೌಪದಿ ಮುರ್ಮು ಅವರು ಹೊಸದಿಲ್ಲಿಯಲ್ಲಿ ಶನಿವಾರ ಆಯೋಜಿಸಿರುವ ಜಿ 20 ಔತಣಕೂಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವುದು ಇದೀಗ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
ಖರ್ಗೆ ಅವರಿಗೆ ಅಧಿಕೃತ ಆಹ್ವಾನ ನೀಡದಿರುವ ವಿಷಯವನ್ನು ರಾಷ್ಟ್ರಪತಿ ಕಚೇರಿ ದೃಢಪಡಿಸಿದೆ.ಎಲ್ಲ ಕ್ಯಾಬಿನೆಟ್ ಸಚಿವರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಸೇರಿದಂತೆ ಇತರರು ಆಹ್ವಾನಿತರ ಪಟ್ಟಿಯಲ್ಲಿದ್ದಾರೆ.
ಮೂಲಗಳ ಪ್ರಕಾರ ಬೇರೆ ಯಾವುದೇ ರಾಜಕೀಯ ಪಕ್ಷದ ನಾಯಕರನ್ನು ಸಹ ಆಹ್ವಾನಿಸಲಾಗಿಲ್ಲ. ಇದರಲ್ಲಿ ಸಹಜವಾಗಿ ಖರ್ಗೆಯವರೂ ಸೇರಿದ್ದಾರೆ. ಆದರೆ ಇದು ಪ್ರಸಕ್ತ ರಾಜಕೀಯ ವಿದ್ಯಮಾನಗಳಲ್ಲಿ ಭಿನ್ನ ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ