ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಈ ಮೂಲಕ 24 ವರ್ಷಗಳ ಬಳಿಕ ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತಾದವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಶಶಿತರೂರ್ ಅವರನ್ನು ಹಿಂದಿಕ್ಕಿದ ಖರ್ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
1998ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರು ಜಿತೇಂದ್ರ ಪ್ರಸಾದ್ ಅವರನ್ನು ಸೋಲಿಸಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2017 ಡಿಸೆಂಬರ್ ನಲ್ಲಿ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದರು. ಆದರೆ 2019ರಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಅಂದಿನಿಂದ ಸೋನಿಯಾ ಗಾಂಧಿಯವರೇ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಎಐಸಿಸಿ ಅಧ್ಯಕ್ಷರಾಗಿ ಕರ್ನಾಟಕದ ಖರ್ಗೆ ಆಯ್ಕೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರು 7,897 ಮತಗಳನ್ನು ಪಡೆದಿದ್ದರೆ ಶಶಿ ತರೂರ್ 1072 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ನೂತನ ಅಧ್ಯಕ್ಶರಾಗಿ ಆಯ್ಕೆಯಾದ ಖರ್ಗೆಯವರಿಗೆ ಶಶಿ ತರೂರ್ ಅಭಿನಂದನೆ ತಿಳಿಸಿದ್ದಾರೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ; ಮಾಜಿ ಸಿಎಂ ಬಿಎಸ್ ವೈ ಭಾಗಿ
https://pragati.taskdun.com/latest/b-s-yedyurappabjp-election-committee-meetingdelhi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ