Belagavi NewsBelgaum NewsKannada NewsKarnataka NewsLatest

*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಹುದ್ದೆಗಳ ಭರ್ತಿಗೆ ಕ್ರಮ*

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ೨೦೧೬ ಜನವರಿಯಿಂದ ಇದುವರೆಗೆ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ ಇತರೆ ಕಾರಣಗಳಿಂದ ಖಾಲಿ ಇರುವ ಭೋದಕ ಮತ್ತು ಭೋದಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನಪರಿಷತ್ ನಲ್ಲಿ ನಿಯಮ ೩೩೦ ರಡಿ ಸದಸ್ಯರಾದ ಮಧು ಜಿ ಮಾದೇಗೌಡ, ಮರಿ ತಿಬ್ಬೇಗೌಡ, ಎಸ್.ಎಲ್. ಭೋಜೇಗೌಡ ಹಾಗೂ ಶಶಿಲ್ ಜಿ ನಮೋಶಿ ಅವರು ಮಂಡಿಸಿದ್ದ ವಿಷಯಕ್ಕೆ ಉತ್ತರಿಸಿ ಮಾತನಾಡಿದರು,

ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ೧ ನೇ ಜನೆವರಿ ೨೦೧೬ ರಿಂದ ೩೧ ನೇ ಡಿಸೆಂಬರ್ ೨೦೨೦ ರ ವರೆಗೆ ನಿವೃತ್ತಿ, ಮರಣ, ರಾಜೀನಾಮೆ ಇನ್ನಿತರೆ ಕಾರಣಗಳಿಂದ ಖಾಲಿಯಾಗಿರುವ ೪೫೨೧ ಭೋಧಕ ಹುದ್ದೆಗಳನ್ನು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಬಾಕಿ ಇರುವ ೨೬೭ ಭೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸಹಮತಿ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಶಿಕ್ಷಕರ ನೇಮಕಾತಿಗೆ ಕ್ರಮ:

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಕರ ಕೊರತೆಯನ್ನು ತುಂಬುವುದರ ಜೊತೆಗೆ ಈ ಭಾಗದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಆದ್ಯತೆಯಲ್ಲಿ ಒದಗಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಶಶೀಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಣ ಆಯುಕ್ತಾಲಯದಲ್ಲಿ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಸಿಬ್ಬಂದಿಗಳ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಪ್ರಾಥಮಿಕ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಕುರಿತಂತೆ ಸದಸ್ಯ ಎಸ್.ವಿ. ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್. ಮಧು ಬಂಗಾರಪ್ಪ ಅವರು, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ ೨೧೨೦ ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ೨೫೦೦ ಹುದ್ದೆಗಳ ಭರ್ತಿ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button