Kannada NewsKarnataka NewsLatest

*ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಏಮ್ಸ್ ಆಸ್ಪತ್ರೆಯ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವೈದ್ಯಕೀಯ ಉಪಕರಣಗಳು ಸುಟ್ಟು ಕರಕಲಾಗಿವೆ. 8 ಅಗ್ನಿಶಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಮುಂಜಾಗೃತಾ ಕ್ರಮವಾಗಿ ರೋಗಿಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button