Kannada NewsKarnataka News

*ಪೊಲೀಸರ ಮನೆಯಲ್ಲೇ ಕಳ್ಳತನ ಮಾಡಿದ ಐನಾತಿ ಕಳ್ಳರು*

ಪ್ರಗತಿವಾಹಿನಿ ಸುದ್ದಿ: ಕಳ್ಳರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗತ್ತಲೇ ಇದ್ದು, ಇದೀಗ ಕಳ್ಳರನ್ನು ಹಿಡಿಯುವ ಪೊಲೀಸರ ಮನೆಯಲ್ಲೇ ಕಳ್ಳತನವಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. 

Home add -Advt

ಹುಣಸೂರು ತಾಲೂಕಿನ ಬಿಳಿಕೆರೆಯ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಹಾಡುಹಗಲೇ ಈ ಕೃತ್ಯ ನಡೆದಿದ್ದು, ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಸುಧಾರಾಣಿಯವರ ಮನೆಯಲ್ಲಿ ಈ ಘಟನೆ ನಡೆದಿದೆ. 

ಸುಧಾರಾಣಿ ರವರು ಕರ್ತವ್ಯಕ್ಕೆ ತೆರಳಿದ್ದ ಸಮಯದಲ್ಲಿ ಹಾಡುಹಗಲೇ ಖದೀಮರು ಮನೆ ಬೀಗ ಒಡೆದು 30 ಗ್ರಾಂ ಚಿನ್ನಾಭರಣ ಹಾಗೂ 10 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಸದ್ಯ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

Related Articles

Back to top button