Kannada NewsNational

*ಏರ್ ಇಂಡಿಯಾದ 3 ಉನ್ನತಾಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ೨೪೨ ಜನರು ಸಾವನ್ನಪ್ಪಿದ ದಿರಂತದ ಬಳಿಕ ಏರ್ ಇಂಡಿಯಾದ ಮೂವರು ಉನ್ನತಾಧಿಕಾರಿಗಳ ವಿರುದ್ಧ ನಾಗರಿಕ ವಿಮಾನಯಾನ ನಿರ್ದೇಶನಾಲಯ ಶಿಸ್ತುಕ್ರಮ ಕೈಗೊಂಡಿದೆ.

ಏರ್ ಇಂಡಿಯಾದ ವಿಭಾಗೀಯ ಉಪಾಧ್ಯಕ್ಷ ಸೇರಿದಂತೆ ಏರ್ ಇಂಡಿಯಾದ ಮೂವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಜೂನ್ 20ರಂದು ಡಿಜಿಸಿಎ ಹೊರಡಿಸಿದ್ದ ಆದೇಶದಲ್ಲಿ ಟಾಟಾ ಗ್ರೂಪ್ ಒಡೆತನ ಏರ್ ಇಂಡಿಯಾದ ಈ ಅಧಿಕಾರಿಗಳ ವಿರುದ್ಧ ಆಂತರಿಕ ಶಿಸ್ತುಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಸೂಚಿಸಿತ್ತು.

ಅಹಮದಾಬಾದ್ ನಲ್ಲಿ ವಿಮಾನ ಅಪಘಾತದ ಬಳಿಕ ಏರ್ ಇಂಡಿಯಾದ ಪ್ರಮುಖ ವೇಳಾಪಟ್ಟಿ ಮತ್ತು ಸಿಬ್ಬಂದಿಗಳ ರೋಸ್ಟರಿಂಗ್ ನಲ್ಲಿ ಪದೇ ಪದೇ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾದ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಕ್ರಮ ಕೈಗೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button