Kannada NewsLatestNational

*ಮತ್ತೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದು ದುರಂತಕ್ಕೀಡಾದ ಘಟನೆ ಬೆನ್ನಲ್ಲೇ ಸಾಲು ಸಾಲು ಏರ್ ಇಂಡಿಯಾ ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಅಲ್ಲದೇ ತುರ್ತು ಭೂಸ್ಪರ್ಶ ಮಾಡಿದ ಪ್ರಕರಣ ಬೆಳಕಿಗೆ ಬರುತ್ತಿದೆ. ಇಂದು ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತುರ್ತು ಭೂಸ್ಪರ್ಶ ಮಾಡಿದೆ.

ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಕೋಲ್ಕತ್ತಾದಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ.

ವಿಮಾನದ ಒಂದು ಎಂಜಿನ್ ನಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನ ಕೋಲ್ಕತ್ತಾದಿಂದ ಮುಂಬೈಗೆ ಹಾರಲು ಸಾಧ್ಯವಾಗಿಲ್ಲ. ಪ್ರಯಾಣಿಕರನ್ನು ಕೋಲ್ಕತ್ತಾದಲ್ಲಿ ಇಳಿಸಲಾಗಿದ್ದು, ಬಳಿಕ ಪ್ರಯಾಣಿಕರಿಗೆ ಏರ್ ಇಂಡಿಯಾ ಕೋಲ್ಕತ್ತಾದಿಂದ ಮುಂಬೈಗೆ ಮತ್ತೊಂದು ವಿಮಾನ ವ್ಯವಸ್ಥೆ ಮಾಡಿದೆ.

Related Articles

Back to top button