*ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ*: *ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿ ಎಕ್ಸ್ ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿದಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಘಟನೆ ನಡೆದಿದ್ದರೂ ವಿಮಾನವು ತನ್ನ ಪ್ರಯಾಣವನ್ನು ಪೂರ್ಣಗೊಳಿಸಿದೆ. ಭೂಸ್ಪರ್ಶದ ನಂತರ ಅದನ್ನು ಪಾರ್ಕಿಂಗ್ ಸ್ಟ್ಯಾಂಡ್‌ಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಶನಿವಾರ ಕೂಡ ಇಂತಹದ್ದೇ ಅವಘಡ ಸಂಭವಿಸಿತ್ತು. ದುಬೈನಿಂದ ಆಗಮಿಸಿದ ಎಮಿರೇಟ್ಸ್ ವಿಮಾನವೊಂದು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪಕ್ಷಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಆ ವಿಮಾನದ ಹಾರಾಟದಲ್ಲಿ ವಿಳಂಬ ಉಂಟಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




