Kannada NewsLatestNational
*ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ: ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹಲವು ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಕಂಡುಬರುತ್ತಿವೆ. ಏರ್ ಇಂಡಿಯಾ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ತುರ್ತು ಭೂಸ್ಪರ್ಶವಾದ ಘಟನೆ ನಡೆದಿದೆ.
ದೆಹಲಿಯಿಂದ ಇಂದೋರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಕಾಕ್ ಪಿಟ್ ಸಿಬ್ಬಂದಿಗೆ ಎಂಜಿನ್ ನಲ್ಲಿ ಬೆಂಕಿ ಎಚ್ಚರಿಕೆ ಸಂದೇಶ ರವಾನಿಸಿದೆ. ತಕ್ಷಣ ಸಿಬ್ಬಂದಿಗಳು ತೊಂದರೆಗೊಳಗಾದ ಎಂಜಿನ್ ಸ್ಥಗಿತಗೊಳಿಸಿ ಪ್ರಯಣಿಕರನ್ನು ರಕ್ಷಿಸಿದ್ದಾರೆ. ವಿಮಾನ ಮತ್ತೆ ದೆಹಲಿ ಏರ್ ಪೋರ್ಟ್ ನಲ್ಲಿ ತುರ್ತು ಬೂಸ್ಪರ್ಷವಾಗಿದೆ.
ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕಿಳಿಸಲಾಗಿದ್ದು, ವಿಮಾನತದಲ್ಲಿ ತಪಾಸಣೆ ನಡೆಸಲಾಗಿದೆ. ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ.