LatestWorld

*ಮತ್ತೊಂದು ವಿಮಾನ ತುರ್ತು ಭೂಸ್ಪರ್ಶ: ಏನಾಗಿದೆ ಈ ವಿಮಾನಗಳಿಗೆ?*

ಪ್ರಗತಿವಾಹಿನಿ ಸುದ್ದಿ: ಇಂದು ಒಂದೇ ದಿನದಲ್ಲಿ ಸಾಲು ಸಾಲು ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡುಬಂದು ಎಮರ್ಜನ್ಸಿ ಲ್ಯಾಂಡಿಂಗ್ ಆದ ಪ್ರಕರಣಗಳು ಬೆಳಕಿಗೆ ಬಂದಿದೆ.

ಲಕ್ನೋದಲ್ಲಿ ಸೌದಿ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ ಬೆನ್ನಲ್ಲೇ, ಲಂಡನ್ ನಿಂದ ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್ ಲೈನ್ಸ್ ವಿಮಾನ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಮತ್ತೆ ಲಂಡನ್ ಗೆ ವಾಪಸ್ ಆಗಿದೆ.

ಈ ಘಟನೆಗಳ ಬೆನ್ನಲ್ಲೇ ಏರ್ ಇಂಡಿಯಾ ವಿಮಾನದಲ್ಲೂ ತಾಂತ್ರಿಕ ದೋಷ ಕಂಡು ಬಂದು ವಾಪಸ್ ಆದ ಘಟನೆ ನಡೆದಿದೆ.

ಹಾಂಕಾಂಗ್ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತಕ್ಷಣ ವಿಮಾನವನ್ನು ಮತ್ತೆ ಹಾಂಕಾಂಗ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಇರಬಹುದು ಎಂದು ಪೈಲಟ್ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಮಾನವನ್ನು ಹಾಂಕಾಂಗ್ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ದೋಷದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button