ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ತಾಂತ್ರಿಕ ದೋಷ ಸಮಸ್ಯೆಗಳಿಂದ ತುರ್ತು ಭೂಸ್ಪರ್ಶದಂತಹ ಘಟನೆಗಳು ನಡೆಯುತ್ತಿವೆ. ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತಕ್ಷ್ಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಭಾನುವಾರ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಐಎ ನಿಂದ ಭಾನುವಾರ ಸಂಜೆ 7ಗಂಟೆಗೆ 2820 ಏರ್ ಇಂದಿಯಾ ವಿಮಾನ ಟೇಕಾಫ್ ಆದ ಕೆಲ ಸಮಯದಲ್ಲೇ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನ ಒಂದು ಗಂಟೆಕಾಲ ಬೆಂಗಳೂರಿನ ಸುತ್ತ ತಿರುಗಿ ಬಳಿಕ ತುರ್ತು ಭೂ ಸ್ಪರ್ಶ ಮಾಡಲಾಯಿತು.
ಪ್ರಯಾಣಿಕರೆಲ್ಲರೂ ಸುರಕ್ಷತರಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳುಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ