Latest

*ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಮಾನವನ್ನು ಅಬುಧಾಬಿಯ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಟೆಕ್ ಆಫ್ ಆದ ಕೆಲ ಸಮಯದಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ. ಎಂಜಿನ್ ನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ತಕ್ಷಣ ವಿಮಾನವನ್ನು ವಾಪಸ್ ಅಭುಧಾಬಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.

ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಸಮುದ್ರಮಟ್ಟದಿಂದ ಸುಮಾರು 1000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದಂತೆ ಎಂಜಿನ್ ನಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ.

*ಭಿನ್ನಾಭಿಪ್ರಾಯವಿದೆ ಆದರೆ….ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದೇಕೆ?*

https://pragati.taskdun.com/g-parameshwarranadeep-surjewalameet/

Related Articles

Back to top button