Belagavi NewsBelgaum NewsKannada NewsKarnataka NewsLatest

*ವಾಯುಭಾರ ಕುಸಿತ: ಹೆಚ್ಚಲಿದೆ ಮಳೆಯ ತೀವ್ರತೆ*

ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ  ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಗದಗದಂತಹ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

ಮತ್ತೊಂದೆಡೆ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಮಂಡ್ಯ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಏಕಾಏಕಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಆರ್ಭಟಿಸುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲೂ ಹವಾಮಾನ ವೈಪರೀತ್ಯ ಉಂಟಾಗಲಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button