Kannada NewsLatest

*BJPಗೆ ಲಕ್ಷ್ಮಣ ಸವದಿ ರಾಜೀನಾಮೆ; ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನನಗೆ ಅಥಣಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಕೊನೇ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದೆ. ಹಾಗಾಗಿ ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ ಸವದಿ, ಬಿಜೆಪಿಯಿಂದ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಜವಾಬ್ದಾರಿ ನನ್ನದು. ನಾಳೆ ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ನಡೆ ತೀರ್ಮಾನ ಮಾಡುತೇನೆ ಎಂದರು.

Home add -Advt

ರಾಜ್ಯದಲ್ಲಿ ಗೆಲ್ಲಿಸುವ ತಾಕತ್ತು ಇರುವುದು ರಮೇಶ್ ಅಣ್ಣನಿಗೆ ಮಾತ್ರ ಅವರು ಸಾಹುಕಾರರು, ಬಲಾಢ್ಯರು ಎಂದು ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಕಳೆದ 20 ವರ್ಷಗಳಿಂದ ನಿಷ್ಠೆಯಿಂದ ಪಕ್ಷ ಸಂಘಟನೆ ಸೇರಿದಂತೆ ಹಲವು ಕೆಲಸವನ್ನು ಮಾಡಿದ್ದೇನೆ. ನನ್ನೊಂದಿಗೆ ಅನೇಕರು ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಎಲ್ಲರೂ ಧನ್ಯವಾದ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ. ನಾಳೆ ಮುಂದಿನ ತೀರ್ಮಾನ ತಿಳಿಸುತ್ತೇನೆ ಎಂದರು.

https://pragati.taskdun.com/karnatakarainupdate/

Related Articles

Back to top button