ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಿಮಾಚಲಪ್ರದೇಶ ಮೂಲದ ಅರ್ಚನಾ ಧೀಮನ್ ಮೃತ ಗಗನಸಖಿ. ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿದ್ದ ಅರ್ಚನಾ ನಿನ್ನೆ ತನ್ನ ಗೆಳೆಯ ಆದೇಶ್ ನನ್ನು ಭೇಟಿಯಾಗಲೆಂದು ಬೆಂಗಳೂರಿಗೆ ಆಗಮಿಸಿದ್ದರು. ತಡ ರಾತ್ರಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅರ್ಚನಾ ಹಾಗೂ ಆದೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಆದೇಶ್ ಕೆಲಸ ಮಾಡುತ್ತಿದ್ದ. ಆದೇಶ್ ಭೇಟಿಗಾಗಿ ಅರ್ಚನಾ ಆಗಮಿಸಿದ್ದಾಗ ತಡರಾತ್ರಿ ಅರ್ಚನಾ ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಅರ್ಚನಾ ಸಾವಿನ ಬಗ್ಗೆ ಆದೇಶ್ ಮೇಲೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಬಾಲ್ಕನಿಯಿಂದ ತಳ್ಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ