ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಬೇಸತ್ತ ಟ್ಯಾಕ್ಸಿ ಚಾಲಕನೊಬ್ಬ ವಿಮಾನ ನಿಲ್ದಾಣದಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ
ಕೊರೊನಾ ಲಾಕ್ ಡೌನ್ ಬಳಿಕ ಸಂಪಾದನೆ ಕಷ್ಟವಾಗಿತ್ತು. ದಿನಕ್ಕೆ 300 ರೂಪಾಯಿ ಸಂಪಾದಿಸುವುದೂ ಸಾಧ್ಯವಾಗುತ್ತಿರಲಿಲ್ಲ. ಇದರಿಂದ ನೊಂದ ಚಾಲಕ ಏರ್ ಪೋರ್ಟ್ ಪಿಕ್ ಅಪ್ ಪಾಯಿಂಟ್ ನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಆತನನ್ನು ಏರ್ ಪೋರ್ಟ್ ಸಿಬ್ಬದಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ದೇಹದ ಶೇ.70ರಷ್ಟು ಭಾಗ ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಪ್ರತಾಪ್ ಕಳೆದ 10 ವರ್ಷಗಳಿಂದ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ ಪೋರ್ಟ್ ಟ್ಯಾಕ್ಸಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ