Karnataka News

*ಐಶ್ವರ್ಯಾ ಗೌಡ ಇಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಚಿನ್ನ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಐಶ್ವರ್ಯಾ ಗೌಡಳನ್ನು ಇಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಮಜೈ ಸಂಸದ ಡಿ.ಕೆ.ಸುರೇಸ್ ತಂಗಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಆರೋಪಿ ಐಶ್ವರ್ಯಾ ಗೌಡ ನಿವಾಸದ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ನಿನ್ನೆ ತಡರಾತ್ರಿ ಐಶ್ವರ್ಯಾ ಗೌಡ ಅವರನ್ನು ಜಡ್ಜ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ಐಶ್ವರ್ಯಾ ಗೌಡ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button