Uncategorized

*ಮಹಾ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನವಾಗಿದ್ದು, ಎನ್ ಸಿಪಿಯ ಅಜಿತ್ ಪವಾರ್ ಬಣ, ಬಿಜೆಪಿ-ಶಿವಸೇನೆ ಮಹಾಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.

ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಬೆನ್ನಲ್ಲೇ ರಾಜಭವನಕ್ಕೆ ತೆರಳಿದ ಅಜಿತ್ ಪವಾರ್, ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದರು. ಬಳಿಕ ರಾಜಭವನದ ದರ್ಭಾರ್ ಹಾಲ್ ನಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ರಮೇಶ್ ಬೈಸ್ ಪ್ರಮಾಣವಚನ ಬೋಧಿಸಿದರು.

Home add -Advt

ಈ ವೇಳೆ ಛಗನ್ ಭುಜ್ ಬಲ್, ಸೇರಿದಂತೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್ ಉಪಸ್ಥಿತರಿದ್ದರು.


Related Articles

Back to top button