Latest

ಆಕಾಶವಾಣಿ ಕೇಂದ್ರದಲ್ಲಿ ಬೆಂಕಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಆಕಾಶವಾಣಿ ಕೆಂದ್ರ ಕಚೇರಿ ದೆಹಲಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿರುವ ಕಚೇರಿಯಲ್ಲಿ ಈ ಅವಘಡ ಸಂಭವಿಸಿದ್ದಾಗಿ ಫೈರ್ ಸರ್ವಿಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ ಆಕಾಶವಾಣಿ ಕೇಂದ್ರ ಕಚೇರಿಯ 101ನೇ ಕೊಠಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. 8 ಅಗ್ನಿಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button