Kannada NewsKarnataka NewsLatestPolitics

*ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್; ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

ಈ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಶ್ರೀ ರಾಮನವಮಿ ದಿನ ಬಿಜೆಪಿ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು.

Home add -Advt

ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದರೂ ಕಾಂಗ್ರೆಸ್ ನನಗೆ ಮೋಸ ಮಾಡಿತು. ನನ್ನ ಮನೆಯನ್ನು ಸುತ್ಟರು. ತಪ್ಪು ಮಾಡಿದವರು ಹೊರಗೆ ಓಡಾಡುತ್ತಿದ್ದಾರೆ. ಸುಖಾ ಸುಮನೇ ನನ್ನ ವಿರುದ್ಧ ಆರೋಪ ಮಾಡುತ್ತಾರೆ ಎಂದು ಕಿಡಿಕಾರಿದರು.

Related Articles

Back to top button