Kannada NewsKarnataka NewsLatest
*ಬಿಜೆಪಿ ಮುಖಂಡನ ಸಹೋದರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಯಾದಗಿರಿಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಸಹೋದರರೊಬ್ಬರನ್ನು ಪೊಲೀಸರು ಬಂದಿಸಿದ್ದಾರೆ.
ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ.
ರಾಜು ರಾಠೋಡ್ ಗೆ ಸೇರಿದ ಯಾದಗಿರಿಯ ಶ್ರೀಲಕ್ಷ್ಮೀ ತಿಮ್ಮಪ್ಪ ರೈಸ್ ಮಿಲ್ ಮೇಲೆ ತಡ ರಾತ್ರಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 550 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಅಕ್ಕಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿ ರಾಜು ರಾಠೋಡ್ ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.




