Belagavi NewsBelgaum NewsKarnataka News

*ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ 50ನೇ ಸಮಾವೇಶ: ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ: ಹಾರನಹಳ್ಳಿ*

ಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಮಾಜದ ಎಲ್ಲ ಮಠಾಶಧೀಶರ ಸಾನ್ನಿಧ್ಯದಲ್ಲಿ ಜನೇವರಿ 18 ಮತ್ತು 19 ರಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ 50ನೇ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.


ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮದ ಸವಿ ನೆನಪಿನಲ್ಲಿ “ವಿಶ್ವಾಮಿತ್ರ” ಬ್ರಾಹ್ಮಣ ಮಹಾ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ನಲ್ಲಿ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮಾಜದ ಸಂಘಟನೆ ಪ್ರಮುಖರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು,
ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಈ ಸಮಾವೇಶವನ್ನು ಆಯೋಜಿಸಲಾಗಿದೆ ಇದಕ್ಕಾಗಿ ಬ್ರಾಹ್ಮಣ ಸಮಾಜದ ಎಲ್ಲ ಮಠಾಧೀಶರನ್ನು ಒಂದೇ ವೇದಿಒಕೆಗೆ ತರುವ ಪ್ರಯತ್ನ ನಡೆದಿದೆ. ಅಷ್ಟೇ ಅಲ್ಲ ಎಲ್ಲರೂ ಸಮಾವೇಶಕ್ಕೆ ಬರಲು ಸಮ್ಮತಿಸಿದ್ದಾರೆಂದರು, ಸಂಸ್ಕಾರ, ಸಂಘಟನೆ, ಸ್ವಾವಲಂಬನೆ, ವೇದ, ಧರ್ಮ, ಸಂಸ್ಕೃತಿಗಳ ಸಂರಕ್ಷಣೆ, ಏಕತೆಯ ಅನುಪಾಲನೆ ಹಾಗೂ ಸಧೃಢ ರಾಷ್ಟ್ರ ನಿರ್ಮಾಣವೇ ಈ ಸಮಾವೇಶದ ಉದ್ದೇಶವಾಗಿದೆ. ಪ್ರಮುಖವಾಗಿ ಈ ಸಮಾವೇಶದಲ್ಲಿ ತ್ರೀಮತಸ್ಥ ಬ್ರಾಹ್ಮಣ ಸಮಾಜದ ಪ್ರಮುಖ ಪೀಠಾಧಿಪತಿಗಳು, ಬಾಂಧವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ರಾಜ್ಯದ ಗಡಿ ಬೆಳಗಾವಿ ಜಿಲ್ಲೆ ಬ್ರಾಹ್ಮಣ ಸಮಾಜ ಸಂಘಟನೆ ಇಡೀ ರಾಜ್ಯದಲ್ಲಿಯೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನ ಸಮಾವೇಶಕ್ಕೆ ಇಲ್ಲಿಂದಲೇ ನಮಗೆ ಪ್ರೇರಣೆ ದೊರಕಿದೆ.


ಬ್ರಾಹ್ಮಣ ಸಮಾಜದ ಬಂಧುಗಳು ಉದ್ಯಮ, ವ್ಯಾಪಾರ-ವಹಿವಾಟು, ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಸಮ್ಮೇಳನಕ್ಕೆ ತನು, ಮನ, ಧನದಿಂದ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.


ಬೆಳಗಾವಿ ಮಹಾನಗರ ಮತ್ತು ಜಿಲ್ಲೆಯ ವಿವಿಧ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.


ಸಮ್ಮೇಳನದಲ್ಲಿ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಮಹಾ ಸ್ವಾಮಿಗಳು, ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರಭಾರತೀ, ಶ್ರೀ ಭಾರತೀತಿರ್ಥ ಮಹಾಸ್ವಾಮಿಗಳು, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಸೋಂದಾ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಶೃಂಗೇರಿ ಶಿವಗಂಗಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮಿಗಳು, ಶ್ರೀ ಸಂಸ್ಥಾನ ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಮನ್ನೆಲೆಮಾವಿನ ಮಠದ ಶ್ರೀ ಮಾಧವಾನಂದ ಭಾರತೀ ಸ್ವಾಮೀಜಿ, ಅವನಿ ಶೃಂಗೇರಿ ಮಠದ ಶ್ರೀ ಅದ್ವೈತಾನಂದ ಭಾರತೀ ಸ್ವಾಮೀಜಿ ಮತ್ತು ಬೆಳಗಾವಿ ಜಿಲ್ಲೆಯ ಮುರುಗೋಡು ಚಿದಂಬರ ಮಠದ ಶ್ರೀ ದಿವಾಕರ ದೀಕ್ಷಿತರು ಸೇರಿದಂತೆ ಇನ್ನೂ ಅನೇಕ ಪ್ರಮುಖ ಪೀಠಾಧಿಪತಿಗಳು ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು.


ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವೇದ ಪಾರಾಯಣ, ಧರ್ಮ ಸಭೆ, ವಿಚಾರ ಗೋಷ್ಠಿಗಳು, ಸಾಧಕರಿಗೆ ಸನ್ಮಾನಿಸಲಾಗುವುದು. ಜೊತೆಗೆ ಸಮ್ಮೇಳನದ ಮತ್ತೊಂದು ವೇದಿಕೆಯಲ್ಲಿ ವ್ಯಾಪಾರ, ವಾಣಿಜ್ಯ ಸಮಾವೇಶ, ವಧು-ವರರ ಸಮಾಗಮ, ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ತಮಗಳನ್ನು ಆಯೋಜಿಸಲಾಗುವುದು ಎಂದ ಅವರು, ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಹಾಗೂ ರಾಜ್ಯ ಸಚಿವ ಸಂಪುಟದ ಸಚಿವರು, ಶಾಸಕರು, ಸಂಸದರು ಮತ್ತು ನಾಡಿನ ಪ್ರಮುಖ ವಿಪ್ರ ಬಂಧುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಿರಿಯ ಉದ್ಯಮಿ ಅನಿಲ ಪೊತದಾರ ಮಾತನಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಬ್ರಾಹ್ಮಣ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದರು.


ಬ್ರಾಹ್ಮಣ ಸಮಾಜ ಟ್ರಸ್ಟ ಅಧ್ಯಕ್ಷ ರಾಮ ಭಂಡಾರಿ, ಉಪಾಧ್ಯಕ್ಷ ಭರತ ದೇಶಪಾಂಡೆ, ಶಿರೀಶ್ ಕಾನಿಟ್ಕರ, ಅಥಣಿಯ ಹಿರಿಯ ನ್ಯಾಯವಾದಿ ಎನ್.ಕೆ. ಪಾಟೀಲ ಮಾತನಾಡಿ, ಸಮ್ಮೇಳನದ ಯಶಸ್ಸಿಗೆ ನಾವೆಲ್ಲ ಕೈ ಜೋಡಿಸುತ್ತೇವೆ ಎಂದು ಹೇಳಿದರು.


ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದಶರ್ಿ ಕಾತರ್ಿಕ ಬಾಪಟ ಪ್ರಾಸ್ತಾವಿಕವಾಗಿ ಕುರಿತು ಮಾತನಾಡಿದರು.
ಸಮಾವೇಶದ ಪ್ರಧಾನ ಸಂಚಾಲಕ ಸುಧಾಕರ ಬಾಬು, ವಿಲಾಸ ಜೋಶಿ, ಉಪಾಧ್ಯಕ್ಷ ರಾಜೇಂದ್ರ ದೇಸಾಯಿ, ಸಚಿವ ಸತೀಶ್ ಜಾರಕಿಹೊಳಿ ಅವರ ಸ್ಪೇಷಲ್ ಅಧಿಕಾರಿ ವಿ.ಎನ್‌ .ಪಾಟೀಲ, ಪ್ರಿಯಾ ಪುರಾಣಿಕ, ನಗರಸೇವಕಿ ವಾಣಿ ಜೋಶಿ, ಜಯತೀರ್ಥ ಸವದತ್ತಿ, ಸಂದೀಪ ದೇಶಪಾಂಡೆ, ಅಶೋಕ ದೇಶಪಾಂಡೆ, ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.


ಅಥಣಿಯ ಪತ್ರಕರ್ತ ವೆಂಕಟೇಶ ದೇಶಪಾಂಡೆ ಸ್ವಾಗತಿಸಿ, ವಂದಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಸಂಘಟನೆ ಮತ್ತು ಸಮಾವೇಶದ ಸಿದ್ಧತೆ ಬಗ್ಗೆಯೂ ಕೂಡ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ವಿವಿಧ ಬ್ರಾಹ್ಮಣ ಸಂಘಟನೆ ವತಿಯಿಂದ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರನ್ನು ಸನ್ಮಾನಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button