Latest

ದೆಹಲಿಯಲ್ಲಿ ಸ್ಫೋಟ ಪ್ರಕರಣ; ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸರ ತಂಡಕ್ಕೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಕೃತ್ಯದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳದ ಪಕ್ಕದಲ್ಲಿಯೇ ಲಕೋಟೆ ಪತ್ತೆಯಾಗಿದ್ದು, ಅದರಲ್ಲಿ ಇದು ಕೇವಲ ಟ್ರಯಲ್ ಅಷ್ಟೇ ಎಂದು ಬರೆದಿರುವ ಪತ್ರ ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಮತ್ತಷ್ಟುಕಡೆಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಕೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಜನವರಿ 29ರಂದು ಇಸ್ರೇಲ್ ರಾಯಭಾರ ಕಚೇರಿ ಬಳಿ ಕಾರಿನಲ್ಲಿ ಬಂದಿಳಿದ ಇಬ್ಬರು ವ್ಯಕ್ತಿಗಳಿಂದ ಈ ಕೃತ್ಯ ನಡೆದಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಾಹಿತಿ ಲಭ್ಯವಾಗಿದೆ.

Home add -Advt

Related Articles

Back to top button