*ಮಹಾ ಮೈತ್ರಿಕೂಟ ಸಭೆಗೆ ಆಗಮಿಸಿದ ಮಾಜಿ ಸಿಎಂ ಅಖಿಲೇಶ್ ಯಾದವ್; ಹೂಗುಚ್ಛ ನೀಡಿ ಬರಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಕೇಂದ್ರದ ಪ್ರತಿಪಕ್ಷಗಳ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಸಮಾಜವಾದಿ ಪಕ್ಷದ ವರಿಷ್ಠ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದರು.
ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಖಿಲೇಶ್ ಯಾದವ್ ಅವರನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದರು. ಈ ವೇಳೆ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಈ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಮಹಾ ಮೈತ್ರಿ ಕೂಟ ಸಭೆ ನಡೆಯಲಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸಭೆ ನಡೆಯಲಿದ್ದು, 24 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈಗಗಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಸಿಪಿಐಎಂ ಮುಖ್ಯಸ್ಥ ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯಕರು ಆಗಮಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ