*ಗೃಹಲಕ್ಷ್ಮೀ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಕೆಲವೇ ಕ್ಷಣಗಳಲ್ಲಿ ಸಿಎಂ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿಗೆ ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಸನ್ಮಾನ ಮಾಡಲಿದ್ದಾರೆ.
ಬೆಳಗಾವಿಯ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅರಬಾವಿ ಕ್ಷೇತ್ರದಲ್ಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಈ ವೇಳೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅಜ್ಜಿ ಅಕ್ಕಾತಾಯಿ ಲಂಗೂಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಲಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಮಹಿಳೆ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದರು. ಹಿರಿಜೀವದ ಸಂಭ್ರಮಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೇ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಹಿರಿಯರ ಹಾಗೂ ನಾಡಿನ ಪ್ರತಿಯೊಬ್ಬರಿಗೆ ತಲುಪಿದೆ ಎಂಬುದು ಮತ್ತೊಮ್ಮೆ ಖಾತ್ರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಬೆಳಗಾವಿಯವರೇ ಆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಅಜ್ಜಿ ಅಕ್ಕತಾಯಿ ಅವರನ್ನು ಕರೆಸಿದ್ದು, ಕೆಲ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಅಕ್ಕತಾಯಿ ಅವರನ್ನು ಸನ್ಮಾನಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ