Belagavi NewsBelgaum NewsKannada NewsKarnataka NewsNationalPolitics
*ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಕ್ಷರ ದಾಸೋಹ ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ಪಂಚಾಯತ್ ನಲ್ಲಿ ಅಕ್ಷರ ದಾಸೋಹ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಭಾಸ್ ವಲ್ಲಾಪುರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕ ಪಂಚಾಯತನಲ್ಲಿ ಅಕ್ಷರ ದಾಸೋಹ ಅಧಿಕಾರಿ ಸುಭಾಸ್ ಅವರು 13000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿದ್ದಾನೆ. ತಾಲೂಕು ಪಂಚಾಯತ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ರಾಜು ನಾಯಕ್ ಗೆ ಪ್ರತಿ ಶಾಲೆಯಿಂದ ಹಣ ವಸೂಲಿ ಮಾಡಿ ನೀಡಬೇಕು ಎಂದು ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿತ್ತು.
ಇದೆ ದೂರಿನನ್ವಯ ಬೆಕ್ಕೇರಿ ಗ್ರಾಮದ ಶಾಲೆಯ ಹಣ ಪಡೆಯುವಾಗ ಹಣ ಸಮೇತ ಸುಭಾಷ್ ವಲ್ಲಾಪುರ್ ನನ್ನು ಲೋಕಾಯುಕ್ತರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.