Education

*ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ: ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ  ವಿದ್ಯಾರ್ಥಿಯೋರ್ವನ ಮೇಲೆ  ಅದೇ ಕಾಲೇಜಿನ ನಾಲ್ವರು ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್  ಮತ್ತು ದೈಹಿಕ ಹಿಂಸೆ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.

ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿ ಹಮೀಮ್ ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ.  

ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್ ಅವರಿಗೆ ಒದಗಿಸಿದ್ದು, ಈ ಕುರಿತು ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಸೂಕ್ತ ಸಹಾಯ ಹಾಗೂ ಹಲ್ಲೆ ಮಾಡಿರುವ 4 ಜನ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ದ ಸೂಕ್ತ ಕಾನೂನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button