
ಪ್ರಗತಿವಾಹಿನಿ ಸುದ್ದಿ: ಕಲಬುರ್ಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ.
ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಕಲಬುರಗಿ ಹೈಕೋರ್ಟ್ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಶಿವರಾತ್ರಿ ವೇಳೆ ಆಲಂದದಲ್ಲಿ ಪೊಲೀಸರು ಕಟ್ಟೆಚ್ಚರಕ್ಕೆ ಸಿದ್ಧತೆ ನಡೆಸಿದ್ದಾರೆ.



