ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಜೋರಾಗಿಯೇ ಆಗುತ್ತಿದೆ. ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇಲ್ಮೈ ಸುಳಿಗಾಳಿ, ಟಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇಂದಿನಿಂದ ಐದು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಮ ಇಲಾಖೆ ಮಾಹಿತಿ ನಿಡಿದೆ.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಕರಾವಳಿ ಭಾಗಕ್ಕೂ ಆರೆಂಜ್ ಅಲರ್ಟ್ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ದಕ್ಷಿಣ, ಉಡುಪಿ, ಮಂಗಳೂರು ಭಾಗಕ್ಕೆ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಅಂತ ಹವಮಾನ ಇಲಾಖೆ ಮುನ್ಸುಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ