
ಪ್ರಗತಿವಾಹಿನಿ ಸುದ್ದಿ: ವಿಶ್ವವಿದ್ಯಾಲಯದ ಬೋಧಕನನ್ನೇ ಮುಸುಕುಧಾರಿ ದುಷ್ಕರ್ಮಿಗಳು ಗುಂಡಿಟ್ತು ಹತ್ಯೆಗೈದಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ವಾಕಿಂಗ್ ಹೋಗುತ್ತಿದ್ದ ಬೋಧಕನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ರಾವ್ ಡ್ಯಾನಿಷ್ ಅಲಿ ಹತ್ಯೆಯಾದ ಬೋಧಕ.
ಗುಂಡು ಹಾರಿಸುವ ಮೊದಲು ಬಂದೂಕುಧಾರಿಯೊಬ್ಬ ನಿನಗೆ ನಾನ್ಯಾರು ಎಂದು ಗೊತ್ತಿಲ್ಲ, ಈಗ ತಿಳಿಯುತ್ತೆ ಎಂದು ಹೇಳಿ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದರು. ಗುಂಡಿನ ದಾಳಿ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ.
ಡ್ಯಾನಿಶ್ ಅಲಿ, 11 ವರ್ಷಗಳಿಂದ ಎಬಿಕೆ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ವಿಜ್ಞಾನವನ್ನು ಕಲಿಸುತ್ತಿದ್ದರು. ಇಬ್ಬರು ಸಹೋದ್ಯೋಗಿಗಳೊಂದಿಗೆ ವಾಕ್ ಮಾಡಲು ಹೊರಟಿದ್ದಾಗ, ಸ್ಕೂಟರ್‌ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಈಕೃತ್ಯವೆಸಗಿ ಪರಾರಿಯಾಗಿದ್ದಾರೆ.



