ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. ಜನತೆ ನಗರಗಳಿಂದ ಹಳ್ಳಿಗೆ ಹೋಗದೆ ಸಹಕರಿಸಬೇಕು ಎಂದು ಸಿಎಂ ವಿನಂತಿಸಿದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಅಶ್ವತ್ಥ ನಾರಾಯಣ, ಡಾ.ಸುಧಾಕರ, ಹಿರಿಯ ವೈದ್ಯ. ಡಾ.ದೇವಿ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ