Kannada NewsKarnataka NewsLatest
ಕೋವಿಡ್ ನಿಂದ ಅನಾಥರಾದ ಮಕ್ಕಳ ಪೋಷಣೆ, ಶಿಕ್ಷಣಕ್ಕೆ ಎಲ್ಲ ರೀತಿಯ ನೆರವು: ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖಾನಾಪುರ ತಾಲ್ಲೂಕಿನ ಘೋಟಗಾಳಿ ಗ್ರಾಮದಲ್ಲಿ ಕೋವಿಡ್ ನಿಂದ ತಂದೆ ಹಾಗೂ ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಇಬ್ಬರು ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.
ಕೂಲಿ ಕೆಲಸ ಮಾಡುತ್ತಿದ್ದ ಘೋಟಗಾಳಿ ಗ್ರಾಮದ ಸಂಜಯ ವೆಂಕಪ್ಪ ಕರಲೆಕರ ಹಾಗೂ ಅವರ ಪತ್ನಿ ಶೀತಲ ವೆಂಕಪ್ಪ ಕರಲೆಕರ ಇತ್ತೀಚೆಗೆ ಕೋವಿಡ್ ನಿಂದ ಮೃತಪಟ್ಟಿದ್ದರು.
ದಂಪತಿಯ ಸಾವಿನಿಂದ ಅನಾಥರಾಗಿರುವ ಅವರ ಮಕ್ಕಳಾದ ಸಂಜನಾ ಕರಲೆಕರ ಹಾಗೂ ಶುಭಂ ಕರಲೆಕರ ಅವರನ್ನು ಸಚಿವೆ ಶಶಿಕಲಾ ಜೊಲ್ಲೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.
ಕೋವಿಡ್ ನಿಂದ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಪೋಷಣೆ ಹಾಗೂ ಶಿಕ್ಷಣಕ್ಕೆ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ. ಅದೇ ಪ್ರಕಾರ ಸಂಜನಾ ಹಾಗೂ ಶುಭಂ ಅವರಿಗೆ ನೆರವು ನೀಡಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ ವರವಟ್ಟಿ, ತಹಶಿಲ್ದಾರ ರೇಷ್ಮಾ ತಾಳಿಕೋಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ