ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಯುವಕರು ಕ್ರೀಡೆಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಎಳೆಬೈಲ್ – ರಾಕಸಕೊಪ್ಪ ಪ್ರೀಮಿಯರ್ ಲೀಗ್ ನ ಪ್ರಥಮ ವರ್ಷದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗಳು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾಗಿವೆ. ಮಕ್ಕಳಿಂದ ವೃದ್ದರವರೆಗೆ ಎಲ್ಲ ವಯಸ್ಸಿನಲ್ಲೂ ವಿವಿಧ ರೀತಿಯ ಕ್ರೀಡಾ ಚಟುವಟಿಕೆಗಳು ಹಿಂದಿನಿಂದಲೂ ನಮ್ಮ ಸಂಸ್ಕೃತಿಯ ಭಾಗವಾಗಿ ಬೆಳೆದುಬಂದಿವೆ. ಹಳೆಯ ಕ್ರೀಡೆಗಳು ಮರೆಯಾಗದಂತೆ ಉಳಿಸಿ, ಬೆಳೆಸಿಕೊಂಡು ಬರುವುದು ಯುವಜನರ ಆದ್ಯಕರ್ತವ್ಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಹೆಚ್ಚಿನ ತರಬೇತಿ ಅವಶ್ಯವಿದ್ದಲ್ಲಿ ಅದಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ