Politics

*ಸರ್ವಪಕ್ಷ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಮಂಡಳಿ ಸೂಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಸರ್ವಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ನೀಡಿದ ವಿವರಗಳ ಹೈಲೈಟ್ಸ್ ಇಲ್ಲಿದೆ.

11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 tmc ಯಂತೆ 20 tmc ನೀರು ಬಿಡಲು ಆದೇಶಿಸಿದ್ದಾರೆ.

ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 tmc, July ನಲ್ಲಿ 31.24tmc ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 tmc ಬಿಡಬೇಕಾಗಿದೆ. ಇಲ್ಲಿಯವರೆಗೂ 5 tmc ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ.

ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು.

ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63 % ಮಾತ್ರ ಭರ್ತಿ ನೀರು ಆಗಿದೆ.

ಕಬಿನಿ ಜಲಾಶಯ ಭರ್ತಿ ಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.

ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMC ಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button