
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ, ಮಹದಾಯಿ ನದಿ ನೀರಿನ ವಿಚಾರವಾಗಿ ಚರ್ಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ವಿಚಾರವಾಗಿ ಕಿಡಿ ಕಾರಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು.
ಇದೀಗ ಸರ್ವಪಕ್ಷ ಸಭೆಗೆ ಮುಹೂರ್ತ ನಿಗದಿಯಾಗಿದ್ದು, ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ