ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಬಾಯ್ ವಾಲಾ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕಠಿಣ ನಿಯಮ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ಸಹಕಾರ ನೀಡುವುದಾಗಿ ವಿಪಕ್ಷಗಳು ತಿಳಿಸಿವೆ. ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಮಾಡಲು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ಹೇಳಿದರು.
ಕೋವಿಡ್ ನಿಂದಾಗಿ ಜನರು ತೊಂದರೆಗೆ ಸಿಲುಕಬಾರದು ಜನರ ಜೀವ ರಕ್ಷಣೆ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಾಗಿದ್ದು, ಯಾವೆಲ್ಲ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ಅನುಮೋದನೆ ಬಳಿಕ ಸರ್ಕಾರದ ಮುಖ್ಯಕಾರ್ಯದರ್ಶಿ ಘೋಷಿಸಲಿದ್ದಾರೆ ಎಂದು ಹೇಳಿದರು.
ಇನ್ನು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಲಾಕ್ ಡೌನ್ ಜಾರಿ ಬಗ್ಗೆ ಒತ್ತಾಯಿಸಿಲ್ಲವಾದರೂ ಕಠಿಣ ನಿಲುವು ತೆಗೆದುಕೊಳ್ಳುವಂತೆ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ಲಾಕ್ ಡೌನ್ ಜಾರಿ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕೋವಿಡ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ