
ಪ್ರಗತಿವಾಹಿನಿ ಸುದ್ದಿ: ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯ ವೇಳೆ ನಡೆದ ಎನ್‌ಕೌಂಟರ್ ನಲ್ಲಿ ಅಧಿಕಾರಿಯೊಬ್ಬರು ಸೇರಿದಂತೆ ನಾಲ್ವರು ಯೋಧರು ಬಲಿಯಾಗಿದ್ದಾರೆ.
ದೋಡಾ ಜಿಲ್ಲೆಯ ದೇಸಾ ಪ್ರದೇಶದಲ್ಲಿ ನಡೆದ ಭಯೋತ್ಪಾದಕರೊಂದಿಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮಿರ ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಸೇನೆಯ ನಾಲ್ವಾರು ವೀರ ಮರಣ ಹೊಂದಿದ್ದಾರೆ.
ರಾತ್ರಿ ದೋಡಾ ಜಿಲ್ಲೆಯ ದೇಸಾ ಪ್ರದೇಶದಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಭಾರತೀಯ ಸೇನೆಯ ನಾಲ್ವರು ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ