ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸರಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳನ್ನು ಆಯೋಕ್ ಮಾಡಲು ಮಧ್ಯವರ್ತಿಗಳ ಮೂಲಕ ಲಂಚ ಸ್ವೀಕರಿಸಲಾಗುತ್ತಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ 4 ಕಚೇರಿಗಳ ಮೇಲೆ ಏಕಕಾಲಕ್ಕೆ ಉತ್ತರ ವಲಯ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಯಿತು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ದಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಪರಿಶಿಷ್ಟ ಪಂಗಡಗಳ ಅಲೆಮಾರಿ, ಅಲೆಮಾರಿ ಸೂಕ್ಷ್ಮ ಮತ್ತು ಅಲೆಮಾರಿ ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ದಿ ಕೋಶ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಹಾಗೂ ಅಲ್ಪಸಂಖ್ಯತರ ಅಭಿವೃದ್ಧಿ ನಿಗಮ ಕಚೇರಿಗಳು ದಾಳಿಗೊಳಗಾದವು.
ಲಂಚ ಸ್ವೀಕರಿಸುವ ಉದ್ದೇಶದಿಂದ ಈ ಕಚೇರಿಗಳಲ್ಲಿ ಮಧ್ಯವರ್ತಿಗಳನ್ನು ನೇಮಿಸಿಕೊಳ್ಳಲಾಗಿದೆ ಎನ್ನುವ ದೂರನ್ನು ಆಧರಿಸಿ ಈ ದಾಳಿ ನಡೆಸಲಾಗಿದ್ದು, ಹೆಚ್ಚಿನ ತಪಾಸಣೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ