ಶಬಾನಾ ಅಜ್ಮಿ ಕಾರು ಚಾಲಕನ ವಿರುದ್ಧ ಎಫ್ ಐಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಮುಂಬೈ; ಬಾಲಿವುಡ್ ಹಿರಿಯ ನಟಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಬಾನಾ ಅಜ್ಮಿ ಅವರ ಕಾರು ಚಾಲಕನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ನಿನ್ನೆ ಮಧ್ಯಾಹ್ನ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿರುವ ಕಾರು, ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತಕ್ಕೊಳಗಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಶಬಾನಾ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಕಾರು ಚಾಲಕ ಅಮ್ಲೆಶ್ ಯೋಗೇಂದ್ರ ಕಾಮತ್ ಅವರ ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎಂದು ಅಪಘಾತಕ್ಕೊಳಗಾದ ಲಾರಿಯ ಚಾಲಕ ರಾಜೇಶ್ ಪಾಂಡುರಂಗ ಶಿಂಧೆ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆ ಕಾರು ಚಾಲಕ ಅಮ್ಲೇಶ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಶಬಾನಾ ಅಜ್ಮಿಯವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಅಂಧೇರಿಯಲ್ಲಿನ ಕೋಕಿಲಾಬೆನ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶಬಾನಾ ಅಜ್ಮಿಯವರ ತಲೆಗೆ ಪೆಟ್ಟು ಬಿದ್ದಿದೆ. ಅಲ್ಲದೆ ಬೆನ್ನು ಮೂಳೆಗೆ ಹಾನಿಯಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Related Articles

Back to top button