Belagavi NewsBelgaum NewsCrimeKannada NewsKarnataka NewsNationalPolitics

*ಬಸವಣ್ಣನವರ ಬಗ್ಗೆ ಅವಹೇಳನ ಆರೋಪ*: *ಬೆಳಗಾವಿಯಲ್ಲಿ ರವಿ ಹಂಜಿ ವಿರುದ್ಧ ಎಫ್‌ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 12ನೇ ಶತಮಾನದ ಬಸವಾದಿ ಶರಣರು ಹಾಗೂ ವಚನ ಸಾಹಿತ್ಯದ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ‘ಬಸವ ಮಂಟಪ’ ಪುಸ್ತಕದ ಲೇಖಕ ರವಿ ಹಂಜಿ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಸವಣ್ಣನವರ ಕುರಿತು ಪುಸ್ತಕದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದ್ದು, ಅವರನ್ನು ಕೊಲೆಗಾರ ಹಾಗೂ ಸುಳ್ಳುಗಾರ ಎಂದು ಬಿಂಬಿಸುವ ಮೂಲಕ ಅಪಮಾನ ಮಾಡಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.

12ನೇ ಶತಮಾನದಲ್ಲಿ ಬಸವಾದಿ ಶರಣರು ರಚಿಸಿದ ವಚನಗಳ ಬಗ್ಗೆ ಅವಹೇಳನ ಮಾಡಿರುವುದಲ್ಲದೆ, ವಚನ ಸಾಹಿತ್ಯಕ್ಕೆ ಅಪಮಾನ ಮಾಡಿ ಶರಣರ ಕುಲಕ್ಕೆ ಕಳಂಕ ತರುವ ಪ್ರಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಮಹಾಸಭಾದ ಮುಖಂಡರು ಸಲ್ಲಿಸಿದ ದೂರಿನ ಆಧಾರದ ಮೇಲೆ ಮಾರ್ಕೆಟ್ ಠಾಣೆ ಪೊಲೀಸರು ರವಿ ಹಂಜಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪುಸ್ತಕದ ಲೇಖಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ.

Related Articles

Back to top button