GIT add 2024-1
Beereshwara 33

*ಪರಿಷತ್ ಚುನಾವಣೆಯಲ್ಲಿ ಮೈತ್ರಿಯಿಂದ ಕಾಂಗ್ರೆಸ್ ಮೇಲೆ ಪರಿಣಾಮ ಬೀರುವದಿಲ್ಲ: ಸಿಎಂ ಸಿದ್ದರಾಮಯ್ಯ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್– ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವ ತೊಂದರೆಯೂ ಆಗುವುದಿಲ್ಲ, ಪರಿಷತ್ ಚುನಾವಣೆ ಮೇಲೆ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Emergency Service

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಚುನಾವಣೆಯಲ್ಲೂ ಕಾಂಗ್ರೆಸ್‌ ಪರವಾದ ವಾತಾವರಣವಿದೆ. ಈ ಬಾರಿ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹೀಗಾಗಿಯೇ 6 ತಿಂಗಳ ಮುಂಚೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೆವು. ಮತದಾರರನ್ನು ಭೇಟಿಯಾಗಲು ಅವರಿಗೆ ಸಾಕಷ್ಟು ಸಮಯ ಸಿಕ್ಕಿದೆ ಎಂದರು.


ಪೆನ್‌ಡ್ರೈವ್‌ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ಧರು. ಯಾರು ಸರಿ, ಯಾರು ಸರಿ ಇಲ್ಲ ಎನ್ನುವುದನ್ನು ನಿರ್ಧರಿಸುತ್ತಾರೆ. 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವೈಫಲ್ಯಗಳೇನು, ನಮ್ಮ ಸರ್ಕಾರದ ಸಾಧನೆ ಏನು ಎಂಬುದನ್ನು ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಹೇಳಿದರು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಪೆನ್‌ಡ್ರೈವ್ ಇದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

Laxmi Tai add
Bottom Add3
Bottom Ad 2