Kannada NewsKarnataka NewsNational

*ದೇವರ ದರ್ಶನಕ್ಕೆ ಹೊರಟಿದ್ದ 11 ಜನರು ರಸ್ತೆ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 11 ಜನ ಸಾವನ್ನಪ್ಪಿದ್ದರೆ 10 ಜನರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.‌  

Home add -Advt

ಉತ್ತರಾಖಂಡಕ್ಕೆ ತೆರಳುತ್ತಿದ್ದ ಬಸ್‌ಗೆ ರಸ್ತೆ ಬದಿಯ ಧಾಬಾದಲ್ಲಿ ನಿಂತಿದ್ದೆ ಇದೆ ವೇಳೆ  ಬ್ಯಾಲೆಸ್ಟ್ ಕಲ್ಲುಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾಗಿದೆ.  ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಭಕ್ತರು ಸೀತಾಪುರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೇಥಾ ಗ್ರಾಮದ ನಿವಾಸಿಗಳು.

‘ರಾತ್ರಿ 11 ಗಂಟೆ ಸುಮಾರಿಗೆ ಖುತಾರ್‌ ಪಿಎಸ್‌ ಪ್ರದೇಶದಲ್ಲಿ ಬಸ್‌ ನಿಂತಿತ್ತು. ಪೂರ್ಣಗಿರಿಗೆ ತೆರಳುತ್ತಿದ್ದ ಭಕ್ತರು ಬಸ್‌ ಒಳಗೆ ಕುಳಿತಿದ್ದರು. ಇನ್ನ ಕೆಲವು ಭಕ್ತರು ಢಾಬಾದಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಟ್ರಕ್‌ನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ 11 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡಿರುವ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶಹಜಹಾನ್‌ಪುರ ಎಸ್‌ಪಿ ಅಶೋಕ್‌ಕುಮಾರ್ ಮೀನಾ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 11 ಜನ ಸಾವನ್ನಪ್ಪಿದ್ದರೆ 10 ಜನರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.‌  

Related Articles

Back to top button