ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿದ್ಯಾಗಮ ಕಾರ್ಯಕ್ರಮವನ್ನು ಜಾರಿಗೊಳಿಸುವಲ್ಲಿ ಉಂಟಾಗುವ ಸ್ಥಳೀಯ ಸಮಸ್ಯೆಗಳನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಶಿಕ್ಷಕರಿಗೆ ಮನೆಯಿಂದಲೇ ವಿದ್ಯಾಗಮ ಕಾರ್ಯಕ್ರಮ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಡಿಡಿಪಿಐ ಎ.ಬಿ.ಪುಂಡಲಿಕ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೊರೋನಾ ಮತ್ತು ವಿಪರೀತ ಮಳೆಯ ಸಂದರ್ಭದಲ್ಲಿ ವಿದ್ಯಾಗಮನವನ್ನು ಜಾರಿಗೊಳಿಸುವುದು ತೀರಾ ಕಷ್ಟ. ಮನೆಯಿಂದಲೇ ಶಿಕ್ಷಕರು ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಲ್ಲಿ ಸರಕಾರದ ಆಶಯಕ್ಕೆ ಚ್ಯುತಿ ಉಂಟಾಗದಂತೆ ಯೋಜನೆ ಜಾರಿಗೊಳಿಸಲಾಗುವುದು ಎಂದು ತಿಳಿಸಲಾಯಿತು.
ಮನವಿ ಸ್ವೀಕರಿಸಿದ ಡಿಡಿಪಿಐ ಡಾ.ಎ.ಬಿ.ಪುಂಡಲೀಕ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಬೆಳಗಾವಿ ನಗರ ಹಾಗೂ ಬೆಳಗಾವಿ ಗ್ರಾಮೀಣ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು.
ಜಿಲ್ಲಾ ಅಧ್ಯಕ್ಷ ಜಯಕುಮಾರ ಹೆಬಳಿ, ಪ್ರಧಾನ ಕಾರ್ಯದರ್ಶಿ ಎಂ.ಎಫ್ .ಸಿದ್ದನಗೌಡರ, ಖಜಾಂಚಿ ಆರ್.ವ್ಹಿ.ಗೋಣಿ, ಸಂಘಟನಾ ಕಾರ್ಯದರ್ಶಿ ಅಂಜನಾ ಮುರಗೋಡ ಮೊದಲಾದವರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ