*ನ್ಯಾಯಾಂಗ ಬಂಧನದ ಕೆಲವೇ ಗಂಟೆಗಳಲ್ಲಿ ಬಿಗ್ ರಿಲೀಫ್: ಜೈಲುಸೇರುವ ಮುನ್ನವೇ ಬಿಡುಗಡೆಯಾದ ನಟ ಅಲ್ಲು ಅರ್ಜುನ್*
ಪ್ರಗತಿವಾಹಿನಿ ಸುದ್ದಿ: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲು ಪಾಲಾಗುತ್ತಿದ್ದ ತೆಲುಗು ನಟ ಅಲ್ಲು ಅರ್ಜುನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ತನ್ನ ವಿರುದ್ಧ ದಾಖಲಾಗಿದ್ದ ಕೇಸ್ ರದ್ದು ಕೋರಿ ಹಾಗೂ ಬಂಧನ ಪ್ರಶ್ನಿಸಿ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಜೈಲು ಪಾಲಾಗುವ ಮುನ್ನವೇ ನಟನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
‘ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ಸಂಭವಿಸಿ ರೇವತಿ (39)ಎಂಬ ಮಹಿಳೆ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಥಿಯೆಟರ್ ಮಾಲೀಕ, ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಇಂದು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಲ್ಲು ಅರ್ಜುನ್ ತಕ್ಷಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ