
ಪ್ರಗತಿವಾಹಿನಿ ಸುದ್ದಿ; ಮೂಡಬಿದರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆ ತಾಲೂಕಿನಲ್ಲಿ ನಡೆದಿದೆ.
18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪ ಎಂಬುವವರ ಪುತ್ರ ಮನೋಜ್ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ.
ಇಂದು ಹಾಸ್ಟೇಲ್ ನ ಕೊಠಡಿಯಲ್ಲಿಯೇ ನೆಣಿಗೆ ಕೊರಳೊಡ್ಡಿದ್ದಾನೆ. ವಿದ್ಯಾರ್ಥಿ ಆತ್ಮಹತ್ಯೆ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ಟೇಲ್ ಸಿಸಿಟಿವಿ ವಶಕ್ಕೆ ಪಡೆದಿರುವ ಪೊಲೀಸರು ಆತ್ಮಹತ್ಯೆಗೂ ವಿದ್ಯಾರ್ಥಿಗೆ ಏನಾಗಿತ್ತು ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ