ಪ್ರಗತಿವಾಹಿನಿ ಸುದ್ದಿ: ಒಲಿಂಪಿಕ್ಸ್ ನ ಪುರುಷರ ಕುಸ್ತಿ 57 ಕೆ. ಜಿ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಈ ಬಾರಿ ಒಲಿಂಪಿಲ್ಸ್‌ನಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿದೆ.
ಮೊದಲ ಸುತ್ತಿನ ಪಂದ್ಯದಲ್ಲಿ ನಾರ್ತ್ ಮ್ಯಾಸೆಡೋನಿಯಾದ ಬ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮನ್ ಅಲ್ವೆನಿಯಾದ ಝಲಿಮ್ಯಾನ್ ಅಬಕರೋವ್ ವಿರುದ್ಧ 12-0 ಅಂತರದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು.
21 ವರ್ಷದ ಅಮನ್ ಮೊದಲ ಬಾರಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತಕ್ಕೆ ಕುಸ್ತಿಯಲ್ಲಿ ಒಂದು ಕಂಚಿನ ಪದಕ ಒಲಿದಂತಾಗಿದೆ. ಆರಂಭದಲ್ಲಿ ಅಮನ್ ಎದುರಾಳಿ ಮೇಲೆ ಸಂಪೂರ್ಣ ಮೆಲುಗೈ ಸಾಧಿಸಿದರು. ಕೊನೇ ಹಂತದಲ್ಲಿ ಸುಸ್ತಾದ ಎದುರಾಳಿ ಸೋಲೊಪ್ಪಿ ಕೊಂಡರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಗೆಲುವು ಅಮನ್ ಗೆಲುವು ಸಾಧಿಸಿದ್ದರು.
ಸೆಮಿ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನ್‌ನ ರೀ ಹಿಗುಚಿ ವಿರುದ್ಧ ಸೋಲು ಕಂಡರು. ಹಿಗುಚಿ ರಿಯೊ ಒಲಿಂಪಿಕ್ಸ್‌ನಲ್ಲಿ (2016) ಬೆಳ್ಳಿ ಗೆದ್ದವರು. ಕಳೆದ ವರ್ಷ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಹೆಗ್ಗಳಿಕೆ ಅಮನ್ ಅವರದ್ದಾಗಿದೆ.
57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಳೆದ ಟೋಕಿಯೊ ಬೆಳ್ಳಿ ಪದಕ ಗೆದ್ದಿದ್ದ ರವಿ ದಹಿಯಾ ಅವರನ್ನು ರಾಷ್ಟ್ರೀಯ ಆಯ್ಕೆ ಟ್ರಯಲ್ಸ್‌ನಲ್ಲಿ ಮಣಿಸುವ ಮೂಲಕ ಅಮನ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ